
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಡಿ ದಾಳಿ ಕುರಿತು ಮಾತನಾಡಿ ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಪ್ರಾಮಾಣಿಕರಾ? ಅವರ ಮೇಲೆ ರೇಡ್ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ್ ಸಂಸ್ಥೆ ಮೇಲೆ ಇಡಿ ದಾಳಿ ಪರ ಮಾಹಿತಿ ಗೊತ್ತಿಲ್ಲ. ನಿನ್ನೆ ಅಷ್ಟೆ 1 ಲಕ್ಷ ಜನರಿಗೆ ಹಕ್ಕು ಪತ್ರ ಕೊಟ್ಟಿದ್ದೇವೆ. ಪರಮೇಶ್ವರ್ ಅವರ ತಂದೆ ಗಂಗಯ್ಯ ಈ ವಿದ್ಯಾ ಸಂಸ್ಥೆ ಸ್ಥಾಪಿಸಿದವರು. ಪರಮೇಶ್ವರ್ ದಲಿತ ನಾಯಕರು. ರಾಜ್ಯ ಸರ್ಕಾರದ ಗೃಹ ಸಚಿವರು. ಅವರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗಿದೆ. ಯಡಿಯೂರಪ್ಪ ಹಾನೆಸ್ಟಾ? ವಿಜಯೇಂದ್ರ ಹಾನೆಸ್ಟಾ? ಕುಮಾರಸ್ವಾಮಿ ಹಾನೆಸ್ಟಾ? ಅವರ ಮೇಲೆ ರೇಡ್ ಯಾಕಿಲ್ಲಾ? ಕಾಂಗ್ರೆಸ್‌ನ ಹಿಂದುಳಿದ ದಲಿತ ನಾಯಕರ ಮೇಲೆ ದಾಳಿ ಆಗ್ತಿದೆ. ದಲಿತ ನಾಯಕರ ಟರ‍್ಗೆಟ್ ಮಾಡಿದ್ದಾರೆ ಅನ್ನಿಸುತ್ತೆ. ಮೊದಲು ಐಟಿಯವರು ಮಾಡಿದ್ದರು, ಈಗ ಇಡಿ ಮಾಡಿದ್ದಾರೆ ಎಂದು ಕಿಡಿಕಾರಿದರು.









