27.7 C
Udupi
Friday, July 31, 2026
spot_img
spot_img
HomeBlog'ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಬೇಡ, ಜನರಿಗೆ ತೊಂದರೆ ಆಗುತ್ತದೆ' : ಡಿ.ಕೆ. ಶಿವಕುಮಾರ್ ಮನವಿ

‘ಯಾವುದೇ ಕಾರಣಕ್ಕೂ ಕರ್ನಾಟಕ ಬಂದ್ ಬೇಡ, ಜನರಿಗೆ ತೊಂದರೆ ಆಗುತ್ತದೆ’ : ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ವಿರುದ್ಧ ಆಗಸ್ಟ್‌ 13ರಂದು ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಂದ್‌ ಕೈಬಿಡುವಂತೆ ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, “ಬಂದ್‌ನಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನಸಾಮಾನ್ಯರಿಗೆ ಮಾತ್ರ ತೊಂದರೆಯಾಗುತ್ತದೆ. ಆದ್ದರಿಂದ ಆಗಸ್ಟ್‌ 13ರ ಬಂದ್‌ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.

CWMA ಆದೇಶದ ಕುರಿತು ಪ್ರತಿಕ್ರಿಯಿಸಿದ ಅವರು, “15 ದಿನಗಳ ಕಾಲ ಕಾವೇರಿ ನೀರು ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಇಂತಹ ಆದೇಶ ಬಂದಿದೆ. ಕಳೆದ ವರ್ಷ ಉತ್ತಮ ಮಳೆಯ ಕಾರಣ ತಮಿಳುನಾಡಿಗೆ 400 ಟಿಎಂಸಿಗಿಂತ ಹೆಚ್ಚು ನೀರು ಹರಿದಿತ್ತು. ಸಿಡಬ್ಲ್ಯುಆರ್‌ಸಿ ಶಿಫಾರಸಿನ ವಿರುದ್ಧ ನಾವು ಈಗಾಗಲೇ CWMAಗೆ ಮೇಲ್ಮನವಿ ಸಲ್ಲಿಸಿದ್ದೇವೆ” ಎಂದರು.

CWMA ಸಭೆಗೆ ರಾಜ್ಯದ ಪ್ರತಿನಿಧಿಗಳು ಹಾಜರಾಗಿರಲಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ರಾಜ್ಯದ ಪರವಾಗಿ ಮೂವರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ನೀರು ಬಿಡುಗಡೆಗೆ ಹೆಚ್ಚಿನ ಸಮಯ ನೀಡುವಂತೆ ಮನವಿ ಮಾಡಿದ್ದರು ಎಂದು ತಿಳಿಸಿದರು. ಎಸಿಎಸ್‌ ಗೌರವ್‌ ಗುಪ್ತಾ ರಾಜ್ಯದ ಪರ ಬಲವಾದ ವಾದ ಮಂಡಿಸಿದ್ದಾರೆ ಎಂದು ಹೇಳಿದರು.

ರಾಜ್ಯದ ಜಲಾಶಯಗಳ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು, ಹೇಮಾವತಿ ಶೇ.67, ಕೆಆರ್‌ಎಸ್‌ ಶೇ.36, ಹಾರಂಗಿ ಶೇ.95 ಹಾಗೂ ಕಬಿನಿ ಶೇ.83ರಷ್ಟು ಭರ್ತಿಯಾಗಿದೆ ಎಂದು ತಿಳಿಸಿದರು. ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡುಗಡೆ ಮಾಡಲು ಸೂಚಿಸಿರುವುದಾಗಿ ಹೇಳಿದ ಅವರು, ರಾಜ್ಯದ ರೈತರ ಹಿತ, ಕುಡಿಯುವ ನೀರಿನ ಅಗತ್ಯ ಹಾಗೂ ರಾಜ್ಯದ ಹಿತ ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page