
ನವದೆಹಲಿ: ಮೇ 24ರಂದು ನಡೆದ ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಈ ಕುರಿತಾದ ಸುದ್ದಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.
‘ಯುಪಿಎಸ್‌ಸಿ 2026 ಪ್ರಿಲಿಮಿನರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ, ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಫ್ಯಾಕ್ಟ್ ಚೆಕ್ ವಿಭಾಗ ಸ್ಪಷ್ಟಪಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಹಂಚಿಕೊಂಡಿದ್ದ ಪೋಸ್ಟ್‌ನಲ್ಲಿರುವ ಮಾಹಿತಿ ತಪ್ಪಾಗಿದೆ ಎಂದು ಪಿಐಬಿ ತನ್ನ ಎಕ್ಸ್ ಖಾತೆಯ ಮೂಲಕ ತಿಳಿಸಿದೆ.

































