ಎಸ್‌ಎಸ್‌ಎಲ್‌ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ

ಕೌಡೂರು: ಯುವ ಸಂಗಮ (ರಿ.) ಕೌಡೂರು ವತಿಯಿಂದ ಜೂನ್ 21ರಂದು ಬೈಲೂರಿನ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ಹೃದಯ ತಪಾಸಣೆ (ಇಸಿಜಿ), ಮಂಡಿನೋವು ತಪಾಸಣೆ ಹಾಗೂ ಚರ್ಮರೋಗ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ. ವಿವಿಧ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ರಕ್ತ ಪರೀಕ್ಷೆಯ ವ್ಯವಸ್ಥೆಯೂ ಇರಲಿದ್ದು, ಮಧುಮೇಹ ಪರೀಕ್ಷೆ ಮಾಡಿಸಿಕೊಳ್ಳುವವರು ಖಾಲಿ ಹೊಟ್ಟೆಯಲ್ಲಿ ಬರಲು ಸೂಚಿಸಲಾಗಿದೆ. ಮಂಡಿನೋವು ತಪಾಸಣೆಗೆ ಮಧ್ಯಾಹ್ನ 12 ಗಂಟೆಯೊಳಗೆ ಪರೀಕ್ಷೆ ಮಾಡಿಸಬೇಕು ಎಂದು ಆಯೋಜಕರು ತಿಳಿಸಿದ್ದಾರೆ.
ಇದೇ ವೇಳೆ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಕೌಡೂರು ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಯುವ ಸಂಗಮ ಕೌಡೂರು ಮನವಿ ಮಾಡಿದೆ.

































