
ಕಾರ್ಕಳ :ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನರ‍್ದೇಶಕರ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಇವರು ಮೋರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅನ್ವಿ ಹೆಚ್ ಅಂಚನ್ ವಿಜೇತರಾಗಿದ್ದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಕಾರ್ಕಳದ ಹರೀಶ್ ಹಾಗೂ ಶೋಭಾ ದಂಪತಿಯ ಸುಪುತ್ರಿಯಾಗಿರುತ್ತಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.