
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಮತ್ತು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಬೆಟ್ಟು,ಕಾರ್ಕಳ, ಉಡುಪಿ ಜಿಲ್ಲೆ, ಇದರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್, ಸಾಣೂರು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿದ್ದು, ವಿಶ್ವಾಸ್ ಪ್ರಥಮ ಸ್ಥಾನವನ್ನು, ಕುಮಾರಿ ನವ್ಯಶ್ರೀ ತೃತಿಯ ಸ್ಥಾನವನ್ನು ಮತ್ತು ಕುಮಾರಿ ಕೃತಿಕಾ ತೃತಿಯ ಸ್ಥಾನಗಳನ್ನು ಪಡೆದಿರುತ್ತಾರೆ.
ಇವರೆಲ್ಲರಿಗೆ ರಾಜೇಶ್ವರಿ ಎಜುಕೇಶನ್ ಫೌಂಡೇಶನ್ ಇದರ ಅಧಕ್ಷರಾದ ಶ್ರೀಯುತ ದೇವಿಪ್ರಸಾದ್ ಶೆಟ್ಟಿ, ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಅರ್ಪಿಸಿರುತ್ತಾರೆ.





