
ಲಕ್ನೋ: ಮೀರತ್ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು ಅದೇನೆಂದರೆ ಯಾರಾದರೂ ರಸ್ತೆಗಳಲ್ಲಿ ನಮಾಜ್ ಮಾಡಿದರೆ ಅವರ ಪಾಸ್ಪೋರ್ಟ್, ಚಾಲನಾ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿ ನಗರದಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ಅನುಮತಿ ಇಲ್ಲ, ಯಾರಾದರೂ ಕಂಡು ಬಂದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು. ಈ ಕುರಿತು ಮಾತನಾಡಿದ ಮೀರತ್ ಎಸ್ಪಿ ಆಯುಷ್ ವಿಕ್ರಮ್ ಧಾರ್ಮಿಕ ಮುಖಂಡರು ಮತ್ತು ಇಮಾಮ್‌ಗಳಿಗೆ ಮನವಿ ಮಾಡಲಾಗಿದೆ, ಜನರು ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ. ಈ ನಿರ್ದೇಶನವನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಕಳೆದ ವರ್ಷ ಇದೇ ರೀತಿಯ ಉಲ್ಲಂಘನೆಗಳಿಗಾಗಿ 200 ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, 80 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಗುರುತಿಸಲಾಗಿದೆ. ಈ ವರ್ಷ, ಪೊಲೀಸರು ಸಂಭಾವ್ಯ ಅಪರಾಧಿಗಳ ಮೇಲೆ ನಿಕಟ ಕಣ್ಗಾವಲು ಇರಿಸಲಾಗಿದ್ದು ಸೂಕ್ಷ್ಮ ಪ್ರದೇಶಗಳನ್ನು ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ.
ನಿಯಮಗಳನ್ನು ಉಲ್ಲಂಘಿಸುವ ಯಾರಾದರೂ ಅವರ ಪಾಸ್‌ಪೋರ್ಟ್ ಮತ್ತು ಚಾಲನಾ ಪರವಾನಗಿಯನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ. ಹೆಚ್ಚುವರಿಯಾಗಿ, ಹೊಸ ಪಾಸ್‌ಪೋರ್ಟ್ ಪಡೆಯಲು ನ್ಯಾಯಾಲಯದಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಅಗತ್ಯವಿರುತ್ತದೆ.