
ಬೆಂಗಳೂರು: ಮೇ 26 ಭಾನುವಾರದಂದು ರಾಜ್ಯದಲ್ಲಿ ಒಂದೇ ದಿನ 51 ಜನ ಅಪಘಾತಕ್ಕೆ ಬಲಿಯಾಗಿದ್ದು, ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿ ಸಂಚಾರಿ ನಿಯಮ ಪಾಲಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವಿಗೀಡಾಗಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭಿಕರ ಅಪಘಾತಗಳು ನಡೆದಿದ್ದು ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎಂದು ವರದಿಯಾಗಿದೆ.