
ಬೆಂಗಳೂರು: ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದರು. ನಮಗೆ ಪಂಚ ಶಕ್ತಿಗಳಿಂದಲೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ, ಪ್ರಕೃತಿ ಸೇರಿದಂತೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇದು ರಾಜನ ಮೇಲೆ ಭಂಗ ಬೀರಲಿದೆ ಎಂಬ ಭವಿಷ್ಯವಾಣಿ ಸ್ಫೋಟಕ ಭವಿಷ್ಯ ಇದೀಗ ಮುಡಾ ಹಗರಣ ಬೆಳವಣಿಗೆಗಳು ಗಮನಿಸಿದ್ರೆ ನಿಜವಾಗುತ್ತಾ ಎಂಬ ಆತಂಕ ಕಾಂಗ್ರೆಸ್ ಪಾಳಯದಲ್ಲಿ ಆತಂಕ ತಂದೊಡ್ಡಿದೆ.
ಶ್ರೀಗಳ ಭವಿಷ್ಯ ವಾಣಿ ಬಳಿಕ ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ಕಂಡಿವೆ. ಅದರಲ್ಲೂ ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದ್ದೊಡ್ಡಿದೆ. ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ಹಿನ್ನೆಡೆಯಾಗಿ ಇನ್ನೆರಡೇ ದಾರಿ ಉಳಿದಿದೆ. ಅಲ್ಲೂ ಪರಿಹಾರ ಸಿಗದಿದ್ದರೆ ಇದೀಗ ಸಿಎಂ ಸಿದ್ದರಾಮಯ್ಯರಿಗೆ ಕಂಟಕ ತಪ್ಪಿದ್ದಲ್ಲ ಎಂಬಂತೆ ಬೆಳವಣಿಗೆಗಳು ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ.













