
ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆ ನಡುವೆ ಈಗ ಪಿಂಚಣಿ ಫಲಾನುಭವಿಗಳಿಗೂ ಆತಂಕ ಎದುರಾಗಿದೆ. ರಾಜ್ಯದಲ್ಲಿ ಸುಮಾರು 16 ಲಕ್ಷ ಜನರ ಪಿಂಚಣಿ ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಒಟ್ಟು 82.71 ಲಕ್ಷ ಪಿಂಚಣಿ ಫಲಾನುಭವಿಗಳ ಪೈಕಿ ಹಲವು ಮಂದಿಗೆ ವೃದ್ಧಾಪ್ಯ ವೇತನ, ವಿಧವಾ ಪಿಂಚಣಿ, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲರ ಪಿಂಚಣಿ ಹಣ ಜಮೆಯಾಗಿಲ್ಲ ಎನ್ನಲಾಗಿದೆ. ಇದರಿಂದ ಹಿರಿಯ ನಾಗರಿಕರು ಹಾಗೂ ಅವಲಂಬಿತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸರ್ಕಾರದ ಪರಿಶೀಲನೆ ವೇಳೆ ದಾಖಲೆಗಳ ಕೊರತೆ, ಆದಾಯ ಪ್ರಮಾಣ ಪತ್ರ ಸಲ್ಲಿಸದಿರುವುದು ಹಾಗೂ ಅರ್ಜಿ ಸಲ್ಲಿಸಿದ ವಿಳಾಸದಲ್ಲಿ ವಾಸಿಸದಿರುವುದು ಪಿಂಚಣಿ ಸ್ಥಗಿತಕ್ಕೆ ಕಾರಣ ಎಂದು ತಿಳಿದುಬಂದಿದೆ. ಇದರಡಿ ಲಕ್ಷಾಂತರ ಫಲಾನುಭವಿಗಳ ಪಾವತಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎನ್ನಲಾಗಿದೆ.

































