18.7 C
Udupi
Wednesday, December 24, 2025
spot_img
spot_img
HomeBlogರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಲು ₹1,700 ದರ ನಿಗದಿಪಡಿಸಿದ ಸರ್ಕಾರ

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಮಾಡಲು ₹1,700 ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು ಮತ್ತು ಪ್ರಯೋಗಶಾಲೆಗಳಲ್ಲಿ ನಡೆಸುವ ಇನ್ಫ್ಲುಯೆನ್ಸ ಪರೀಕ್ಷಾ ದರವನ್ನು ₹1700ಕ್ಕೆ ಮಿತಿಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು / ಆಸ್ಪತ್ರೆಗಳು, ಖಾಸಗಿ ಪ್ರಯೋಗಶಾಲೆಗಳು / ಡಯಾಗೋಸ್ಟಿಕ್ ಲ್ಯಾಬೊರೇಟರಿಗಳು ಈ ಮೇಲೆ ತಿಳಿಸಿದ INFLUENZA PANEL TEST ದರವನ್ನು ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವುದು ಹಾಗೂ ಎಲ್ಲಾ SARI ಮತ್ತು ILI ಪ್ರಕರಣಗಳನ್ನು IHIP Portal ನಲ್ಲಿ ಖಡ್ಡಾಯವಾಗಿ ದಾಖಲಿಸುವುದು. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಅಧಿನಿಯಮದಡಿ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಿದೆ.

ರಾಜ್ಯದ ಕೆಲವು ಖಾಸಗಿ ವೈದ್ಯಕೀಯ ಸಂಸ್ಥೆಗಳು, ಖಾಸಗಿ ಪ್ರಯೋಗ ಶಾಲೆಗಳು, ಸಾಮಾನ್ಯ ಜ್ವರಕ್ಕೂ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಪಡೆದು SRF IDಯನ್ನೂ ಸಹ ಸೃಜಿಸದೇ INFLUENZA PANEL ಕಿಟ್ ಬಳಸಿ ಅವಶ್ಯವಿಲ್ಲದ ಪರೀಕ್ಷೆಗಳನ್ನು 8,000 ರೂ.ಗಳಿಂದ 10,000 ರೂ. ಹಣ ಪಡೆದು ಪರೀಕ್ಷೆ ನಡೆಸಿ, ವರದಿಯನ್ನು ರೋಗಿಗಳಿಗೆ ನೀಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಹೀಗಾಗಿ ಭಾರತ ಸರ್ಕಾರದಿಂದ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ, ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳು / ಪ್ರಯೋಗ ಶಾಲೆಗಳು ಕೋವಿಡ್-19 ಪರೀಕ್ಷೆಯನ್ನು ಕಡ್ಡಾಯವಾಗಿ ಎಲ್ಲಾ SARI ಸಂಬಂಧಿಸಿದ ಪ್ರಕರಣಗಳಿಗೆ ಮಾತ್ರ ನಡೆಸುವುದು ಮತ್ತು ILI ಪ್ರಕರಣದ ಶೇ.5 ರಷ್ಟನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲು ಸೂಚಿಸಿರುತ್ತಾರೆ.

ಜ್ವರ ಅಥವಾ ಯಾವುದೇ ರೀತಿಯ ವೈರಲ್ ಸೋಂಕುಗಳಿರುವ ರೋಗಿಗಳಿಗೆ, ಕೆಲವು ಖಾಸಗಿ ಆಸ್ಪತ್ರೆಗಳು ರೋಗ ನಿರ್ಣಯಕ್ಕಾಗಿ INFLUENZA PANEL ಪರೀಕ್ಷೆಯನ್ನು ದಿನನಿತ್ಯದ ಪರೀಕ್ಷೆಯಾಗಿ ಮಾಡುತ್ತಾರೆ. ಆರೋಗ್ಯ ಇಲಾಖೆ ನಿರ್ದೇಶಕರ ನೇತೃತ್ವದಲ್ಲಿ ನಡೆಸಿದ ಸಭೆಯಲ್ಲಿ ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳು / ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಪ್ರಯೋಗ ಶಾಲೆಗಳಲ್ಲಿ ನಡೆಸುವ ಕೋವಿಡ್ ಸೇರಿ ಯಾವುದೇ ರೀತಿಯ ವೈರಲ್ ಸೋಂಕುಗಳಿರುವ ರೋಗಗಳನ್ನು ಪತ್ತೆ ಹಚ್ಚಲು ನಡೆಸಲಾಗುವ INFLUENZA PANEL TEST ದರವನ್ನು 1,700 ರೂ. ಮಿತಿಗೊಳಿಸಲು ನಿರ್ಣಯಿಸಲಾಗಿರುತ್ತದೆ.

ಅದರಂತೆ, ರೋಗಿಗಳು ಅತಿಯಾದ ಶುಲ್ಕಕ್ಕೆ ಒಳಗಾಗದಂತೆ ಮತ್ತು ರಾಜ್ಯದಾದ್ಯಂತ ಕೈಗೆಟುಕುವ ದರದಲ್ಲಿ INFLUENZA PANEL ವೈರಸ್ ಪರೀಕ್ಷೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಶುಲ್ಕವನ್ನು ಪ್ರಮಾಣೀಕರಿಸುವುದು ಮತ್ತು ಇನ್ನು ಮುಂದೆ ಎಲ್ಲಾ SARI ಮತ್ತು ILI ಪ್ರಕರಣಗಳನ್ನು IHIP Portal ನಲ್ಲಿ ಕಡ್ಡಾಯವಾಗಿ ದಾಖಲಿಸುವುದು ಅಗತ್ಯವಾಗಿದೆ ಎಂದು ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇದರನ್ವಯ ದರ ಮಿತಿಗೊಳಿಸಿ ಆದೇಶ ಹೊರಡಿಸಲಾಗಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page