
ಬೆಂಗಳೂರು : ಶಿಕ್ಷಣ ಇಲಾಖೆಯ ಶನಿವಾರ ನಡೆಸಿದ ಸಭೆಯಲ್ಲಿ ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 10ರಷ್ಟು ಶುಲ್ಕ ಹೆಚ್ಚಳ ಮಾಡಲು ಒಪ್ಪಿಗೆ ಸೂಚಿಸಿದೆ. ಸಭೆಯಲ್ಲಿ ಎರಡು ಪಕ್ಷಗಳು ಒಪ್ಪಂದಕ್ಕೆ ಸಹಿ ಹಾಕಿದ್ದು ಅಧಿಕೃತವಾಗಿ ಹೊಸ ಶುಲ್ಕವನ್ನು ನಿಗದಿಪಡಿಸಿದೆ.
ಖಾಸಗಿ ಕಾಲೇಜು ಆಡಳಿತ ಮಂಡಳಿಗಳು 15 ರಿಂದ 20ರಷ್ಟು ಶುಲ್ಕ ಹೆಚ್ಚಳ ಮಾಡಲು ಬೇಡಿಕೆ ಸಲ್ಲಿಸಿದ್ದು ವೈದ್ಯಕೀಯ ಶಿಕ್ಷಣ ಇಲಾಖೆಯು ಶೇಕಡಾ 10ರಷ್ಟು ಹೆಚ್ಚಳಕ್ಕೆ ಸಮ್ಮತಿ ಸೂಚಿಸಿದೆ.
ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ಮಾತನಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಂಚಿಕೆ ಮಾಡುವ ಸರ್ಕಾರಿ ಕೋಟಾದ ಸೀಟುಗಳಿಗೆ 1.40 ಲಕ್ಷ ಹಾಗೂ ಖಾಸಗಿ ಕೋಟದ ಸೀಟುಗಳಿಗೆ 11.88 ಲಕ್ಷ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.













