
ಕರ್ನಾಟಕದ ಚನ್ನಪಟ್ಟಣ ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ.
ಮೂರೂ ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಿಂದ ಚುನಾವಣಾ ಅಧಿಕಾರಿಗಳು ಇವಿಎಂ ಸೇರಿದಂತೆ ಮತ್ತಿತರ ಸಾಮಗ್ರಿಗಳೊಂದಿಗೆ ತಮಗೆ ನಿಗದಿಪಡಿಸಿದ ಮತಗಟ್ಟೆಗೆ ತೆರಳಿ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಶಾಂತಿಯುತ ಮತದಾನಕ್ಕಾಗಿ ಬಿಗಿ ಪೊಲೀಸ್ ಬಂದೋಬಸ್ ಕಲ್ಪಿಸಲಾಗಿದೆ. ಮತದಾನ ನಡೆಯುವ ಮೂರು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಮಧ್ಯ ಮಾರಾಟಕ್ಕೆ ನಿಷೇಧ ಏರಲಾಗಿದೆ. ನವಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.



















