
ಬೆಂಗಳೂರು: ರಾಜ್ಯ ಸರ್ಕಾರವು ದೀಪಾವಳಿ ಹಬ್ಬದ ಸಂದರ್ಭದಲ್ಲಿ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿ ಅಂದರೆ ಶೇ. 2ರಷ್ಟು ಹೆಚ್ಚಿಸಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ವಿಜಯದಶಮಿಯ ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿದ್ದು ಇದೀಗ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಏರಿಕೆ ಮಾಡಿದೆ.








