27 C
Udupi
Sunday, April 26, 2026
spot_img
spot_img
HomeBlogರಾಜ್ಯ ಬಜೆಟ್‌ ನಂತರ ಮತ್ತೆ ಪ್ರತಿ ಲೀಟರ್‌ ಹಾಲಿನ ದರವನ್ನು 5 ರು. ಹೆಚ್ಚಿಸಲು ಕೆಎಂಎಫ್‌...

ರಾಜ್ಯ ಬಜೆಟ್‌ ನಂತರ ಮತ್ತೆ ಪ್ರತಿ ಲೀಟರ್‌ ಹಾಲಿನ ದರವನ್ನು 5 ರು. ಹೆಚ್ಚಿಸಲು ಕೆಎಂಎಫ್‌ ಸಿದ್ಧತೆ…!

ಬೆಂಗಳೂರು : ಈಗಾಗಲೇ ದಿನನಿತ್ಯದ ಅಗತ್ಯ ಖರ್ಚುಗಳಾದ ವಿದ್ಯುತ್, ಮೆಟ್ರೋ ದರ, ಬಸ್ ದರ ಹೆಚ್ಚಾದ ಬೆನ್ನಲ್ಲೇ ರಾಜ್ಯ ಬಜೆಟ್‌ ನಂತರ ಮತ್ತೆ ಪ್ರತಿ ಲೀಟರ್‌ ಹಾಲಿನ ದರವನ್ನು 5 ರು. ಹೆಚ್ಚಿಸಲು ಕೆಎಂಎಫ್‌ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.

ಆಗಸ್ಟ್ 2023 ರಲ್ಲಿ ಹಾಲಿನ ದರವನ್ನು 3 ರು.ಹೆಚ್ಚಿಸಿ, ಲೀಟರ್‌ಗೆ 39 ರು.ಇದ್ದ ಬೆಲೆಯನ್ನು42 ರು.ಗೆ ಹೆಚ್ಚಿಸಲಾಯಿತು. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2 ರು.ಏರಿಕೆ ಮಾಡಲಾಗಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರು.ನಂತೆ ಏರಿಕೆ ಮಾಡಲು ಒತ್ತಡ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಲು ದರ ಏರಿಕೆಗೆ ಅನುಮತಿ ನೀಡುವಂತೆ ಕೆಎಂಎಫ್‌ ರಾಜ್ಯಸರ್ಕಾರಕ್ಕೆ ಕಳೆದ ವರ್ಷವೇ ಪ್ರಸ್ತಾವನೆ ಸಲ್ಲಿಸಿದೆ.

ಈ ಕುರಿತು ಕಳೆದ ತಿಂಗಳು ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಭೆ ನಡೆಸಿ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹಾಲಿನ ದರ ಲೀಟರ್‌ಗೆ 5 ರು.ಏರಿಕೆ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದು, ಸರ್ಕಾರ ಎಷ್ಟು ದರ ಏರಿಕೆಗೆ ಒಪ್ಪಿಗೆ ನೀಡುತ್ತದೆ ಎಂಬುದರ ಮೇಲೆ ತೀರ್ಮಾನ ಕೈಗೊಳ್ಳಲು ನಿರೀಕ್ಷಿಸಲಾಗುತ್ತಿದೆ ಎಂದು ಕೆಎಂಎಫ್‌ ಮೂಲಗಳು ಮಾಹಿತಿ ನೀಡಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page