
ಬೆಂಗಳೂರು: ಜಯಲಕ್ಷ್ಮಿ ಎಂಬುವವರು ರಾಜ್ಯ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮಧ್ಯಂತರ ತಡೆ ನೀಡಿದೆ.
ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡು ಅರ್ಜಿ ವಿಚಾರಣೆಯನ್ನು ಜೂ.4ಕ್ಕೆ ಮುಂದೂಡಿದರು.
ದೊಡ್ಡಬಳ್ಳಾಪುರದ ಟಿ.ಬಿ ನಾರಾಯಣಪ್ಪ ಲೇಔಟ್ ನಿವಾಸಿ ಎಂ ಜಯಲಕ್ಷ್ಮಿ ಅವರು ಹೊಸದಾಗಿ ನಿರ್ಮಿಸಿರುವ ತಮ್ಮ ಮನೆಗೆ ಸಿಂಗಲ್ ಫೇಸ್ ನಿಂದ ತ್ರೀ ಪೇಸ್ ಗೆ ಮೀಟರ್ ಪರಿವರ್ತನೆ ಮಾಡಿಕೊಳ್ಳುವುದಕ್ಕಾಗಿ ಮನವಿ ಸಲ್ಲಿಸಿದ್ದರು ಇದಕ್ಕೆ ಪ್ರತಿಯಾಗಿ ಬೆಸ್ಕಾಂ ಅಧಿಕಾರಿಗಳು ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಪತ್ರ ನೀಡಿದ್ದರು.





