
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಧಾನಾಯಕ್ ಸರ್ಕಾರಿ ಪ್ರೌಢ ಶಾಲೆ, ಎಜುಕೇಷನ್ ಟ್ರಸ್ಟ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ “ಕ್ರೀಡೋತ್ಸವ – 2025” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನವೆಂಬರ್ 14 ಹಾಗೂ 15 ರಂದು ಶಾಲಾ ಮಕ್ಕಳಿಗಾಗಿ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿದ್ದು, ನವೆಂಬರ್ 16ರಂದು ಹಳೆ ವಿದ್ಯಾರ್ಥಿಗಳಿಗಾಗಿ ವಿಶೇಷ ಕ್ರೀಡಾಕೂಟ ಜರುಗಲಿದೆ.
ನ.16 ರಂದು ನಡೆಯುವ
ಕ್ರೀಡಾಕೂಟದಲ್ಲಿ ಕೇವಲ ಹಳೆ ವಿದ್ಯಾರ್ಥಿಗಳಿಗೆ ಮಾತ್ರ ಭಾಗವಹಿಸುವ ಅವಕಾಶ ನೀಡಲಾಗಿದೆ. ತೀರ್ಪುಗಾರರ ತೀರ್ಮಾನ ಅಂತಿಮವಾಗಿದ್ದು, ಅದರ ಕುರಿತು ಯಾವುದೇ ಚರ್ಚೆಗೆ ಅವಕಾಶವಿರುವುದಿಲ್ಲ. ಇದೇ ರೀತಿ ಸಂಘಟಕರ ತೀರ್ಮಾನವೂ ಅಂತಿಮ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಮೂಲಕ ಹಳೆ ವಿದ್ಯಾರ್ಥಿಗಳಲ್ಲಿ ಹಳೆ ನೆನಪುಗಳನ್ನು ಜಾಗೃತಗೊಳಿಸಿ, ಶಾಲೆಯೊಂದಿಗೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ.









