28.2 C
Udupi
Tuesday, May 5, 2026
spot_img
spot_img
HomeBlogರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್‌:...

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್‌: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇ. 26 ರಷ್ಟಿವೆ. ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗದಂತೆ ಹಳ್ಳಿಗಳ ಹೊರಗೆ ಟೋಲ್ ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಟೋಲ್ ಆದಾಯದ ಶೇ.74 ರಷ್ಟು ವಾಣಿಜ್ಯ ವಾಹನಗಳಿಂದ ಬರುತ್ತಿದ್ದು ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್‌ಗಳನ್ನು ಪರಿಚಯಿಸುವ ಬಗ್ಗೆ ನಾವು ಪರಿಗಣಿಸುತ್ತಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ (GNSS) ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು FASTag ಜೊತೆಗೆ ಹೆಚ್ಚುವರಿ ಸೌಲಭ್ಯವಾಗಿ ಜಾರಿಗೆ ತರಲು ನಿರ್ಧರಿಸಿದ್ದು ಕಳೆದ ವರ್ಷ ಜುಲೈನಲ್ಲಿ, ಕರ್ನಾಟಕದ NH-275 ರ ಬೆಂಗಳೂರು-ಮೈಸೂರು ವಿಭಾಗ ಮತ್ತು ಹರಿಯಾಣದ NH-709 ರ ಪಾಣಿಪತ್-ಹಿಸಾರ್ ವಿಭಾಗದಲ್ಲಿ GNSS ಆಧಾರಿತ ಬಳಕೆದಾರ ಶುಲ್ಕ ಸಂಗ್ರಹ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರಾಯೋಗಿಕ ಅಧ್ಯಯನವನ್ನು ಮಾಡಲಾಗಿದೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page