21.3 C
Udupi
Saturday, February 14, 2026
spot_img
spot_img
HomeBlogರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾರ್ಯ: ಏಪ್ರಿಲ್ 30 ರವರೆಗೆ ಬದಲಿ...

ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾರ್ಯ: ಏಪ್ರಿಲ್ 30 ರವರೆಗೆ ಬದಲಿ ಮಾರ್ಗ ವ್ಯವಸ್ಥೆ

spot_imgspot_img

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ ಏಪ್ರಿಲ್ 1ರಿಂದ 30ರವರೆಗೆ ದುರಸ್ತಿ ಕಾಮಗಾರಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದ್ದು ಹೀಗಾಗಿ ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಎಂದು ಮನವಿ ಮಾಡಲಾಗಿದೆ.

ಬದಲಿ ಮಾರ್ಗ ವ್ಯವಸ್ಥೆ:

  • ಮುಡಿಪು-ಕೊಣಾಜೆ ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು, ದ್ವಿಚಕ್ರ ವಾಹನಗಳು ಕೊಣಾಜೆ- ಹರೇಕಳ (ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
  • ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿಚಕ್ರ/ ಲಘು ವಾಹನಗಳು ಅಡ್ಯಾರ್ ಹರೇಕಳ (ಬ್ರಿಡ್ಜ್) ಮುಖಾಂತರ ಸಂಚರಿಸಬಹುದು.
  • ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು- ಉಪ್ಪಿನಂಗಡಿ-ಪುತ್ತೂರು-ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು-ಬೋಳಿಯಾರ್-ಮೆಲ್ಕರ್ ಮೂಲಕ ಸಂಚರಿಸಬಹುದು.
  • ಬಿಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page