26.5 C
Udupi
Thursday, July 2, 2026
spot_img
spot_img
HomeBlogರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ತಿರುವು: ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿಗಳ ಮೂವರು ಬಂಧನ

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ತಿರುವು: ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿಗಳ ಮೂವರು ಬಂಧನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ 49ನೇ ಸಾಕ್ಷಿಯಾಗಿರುವ ಸಂದೀಪ್ ಅವರಿಗೆ ಸಾಕ್ಷಿ ಹೇಳದಂತೆ ಒತ್ತಡ ಹೇರಲಾಗಿದೆ ಎನ್ನಲಾಗಿದೆ.

ನ್ಯಾಯಾಲಯದ ಮುಂದೆ ಸಾಕ್ಷಿದಾರ ಈ ಕುರಿತು ಹೇಳಿಕೆ ನೀಡಿದ ಬಳಿಕ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಅವರಿಗೆ ಭದ್ರತೆ ಒದಗಿಸಿದರು. ಬಳಿಕ ಆರೋಪಿಗಳಿಗಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವೇಣು, ಸುಹಾಸ್ ಮತ್ತು ಪುನೀತ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ತನಿಖೆ ವೇಳೆ ಪುನೀತ್ ‘ಡಿ ಕಂಪನಿ’ ಎಂಬ ಸೋಶಿಯಲ್ ಮೀಡಿಯಾ ಫ್ಯಾನ್ ಪೇಜ್ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಮತ್ತಿಬ್ಬರು ಆರೋಪಿಗಳಾದ ಸುಹಾಸ್ ಹಾಗೂ ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂದೀಪ್ ಅವರನ್ನು ಮಾತುಕತೆ ನೆಪದಲ್ಲಿ ಕರೆಸಿ ಕಾರಿನಲ್ಲಿ ಸುತ್ತಾಡಿಸಿ, ನ್ಯಾಯಾಲಯದಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಲಾಗಿದೆ. ಇದಕ್ಕೆ ಒಪ್ಪದಿದ್ದಾಗ ಸುಹಾಸ್, ಜೈಲಿನಲ್ಲಿರುವ ದರ್ಶನ್ ಹೆಸರಿನಲ್ಲಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿದ್ದಾರೆ. ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಆರೋಪದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್.ಆರ್. ನಗರದಲ್ಲಿನ ಶೆಡ್‌ಗೆ ಕರೆತಂದು ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂಬ ಆರೋಪವಿದ್ದು, ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page