
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಸರ್ಕಾರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕೂಡಲೇ ಎಲ್ಲರೂ ಸರೆಂಡರ್ ಆಗಬೇಕು, ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ಯಾವುದೇ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ. ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಆದೇಶದಲ್ಲಿ ತಿಳಿಸಿದ್ದಾರೆ.