
ಬೆಳಗಾವಿ: ಇಂದು ಬೆಳಗಿನ ಜಾವ 5 ಗಂಟೆ ಆಸುಪಾಸಿನ ಸಮಯದಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು ಎಸ್ಪಿ ಭೀಮಾಶಂಕರ್ ಗುಳೇದ್ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.



















