
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಗಳಂತೆ ಲೈಬ್ರರಿಯ ಕ್ಲರ್ಕ್ ಆಗಿ ಪುಸ್ತಕಗಳನ್ನು ಕೊಡುವುದು ಹಾಗೂ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಮಾಡಿ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ.
ಸದ್ಯ ಒಂದು ದಿನದ ಮಟ್ಟಿಗೆ ಪ್ರಜ್ವಲ್ ಕೆಲಸ ಮಾಡಿ ದಿನಗೂಲಿಯಾಗಿ ದಿನಕ್ಕೆ 522 ರೂ. ಗಳನ್ನ ಪಡೆಯುತ್ತಿದ್ದಾರೆ. ಟ್ರಯಲ್ ಕೋರ್ಟ್‌ಗೆ ಆಗಾಗ ಬರಬೇಕಾಗಿರುವುದರಿಂದ ಹಾಗೂ ವಕೀಲರ ಜೊತೆ ಇತರೇ ಕೇಸ್‌ಗಳ ಸಂಬಂಧ ಚರ್ಚೆ ಮಾಡಬೇಕಾಗಿರುವ ಕಾರಣ ಪ್ರಜ್ವಲ್ ರೇವಣ್ಣ ಅವರನ್ನು ಪೂರ್ತಿ ಕೆಲಸಕ್ಕೆ ನಿಯೋಜಿಸಿಲ್ಲ ಎಂದು ತಿಳಿದು ಬಂದಿದೆ.