25.2 C
Udupi
Tuesday, March 17, 2026
spot_img
spot_img
HomeBlogವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಇಂದು ಪ್ರತಿಪಕ್ಷ ಬಿಜೆಪಿಯು ರಾಜ್ಯಾದ್ಯಂತೆ ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ.

ವಕ್ಫ್‌ ಆಸ್ತಿ ಕುರಿತ ಗೆಜೆಟ್‌ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ವಿವಾದಕ್ಕೆ ಕಾರಣವಾದ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ರೈತರ ಫಲವತ್ತಾದ ಭೂಮಿ, ಮಠ ಮಂದಿರ, ಚರ್ಚ್, ಮಸೀದಿ ಎಲ್ಲಾ ಸಮಾಜದ ಪ್ರಾರ್ಥನಾ ಸ್ಥಳ, ಬಡ ಜನರ ಆಸ್ತಿ ಹಾಗೂ ಸರ್ಕಾರಿ ಬೆಲೆ ಬಾಳುವ ಗೋಮಾಳ ಮತ್ತು ವಾಣಿಜ್ಯ ಉದ್ಯಮಕ್ಕೆ ಮೀಸಲಿಟ್ಟ ಭೂಮಿಯನ್ನು ಕಾನೂನು ಬಾಹಿರವಾಗಿ ಪಹಣಿಯಲ್ಲಿ ವಕ್ಫ್‌ ಮಂಡಳಿ ಹೆಸರನ್ನು ಸೇರಿಸಿ ರಾಜ್ಯದಲ್ಲಿ ತೊಗಲಕ್‌ ದರ್ಬಾರ್‌ ಆಡಳಿತವನ್ನು ಕಾಂಗ್ರೆಸ್‌ ನಡೆಸುತ್ತಿದೆ ಎಂದು ಆರೋಪಿಸಿ, ಇಂದು ಬಿಜೆಪಿಯು ಹೋರಾಟ ಹಮ್ಮಿಕೊಂಡಿದೆ.

ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಗಣೇಶ ಮೈದಾನದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಆದೇಶದ ಮೇರೆಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕರಾದ ರಾಜ್ಯ ಕಾರ್ಯದರ್ಶಿ ಡಾ. ಶೈಲೇಂದ್ರ ಬೆಲ್ದಾಳೆ ಹಾಗೂ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page