24.8 C
Udupi
Monday, April 6, 2026
spot_img
spot_img
HomeBlogವಕ್ಫ್‌ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸೂಚಿಸಿದ ಕೇಂದ್ರ ಸಂಪುಟ

ವಕ್ಫ್‌ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸೂಚಿಸಿದ ಕೇಂದ್ರ ಸಂಪುಟ

spot_imgspot_img

ನವದೆಹಲಿ: ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ ಸಮಿತಿ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ ಕೇಂದ್ರ ಸಂಪುಟವು ಜಂಟಿ ಸಂಸದೀಯ ಸಮಿತಿ ನೀಡಿದ ವರದಿ ಮೇರೆಗೆ ವಕ್ಫ್ ಮಸೂದೆಗೆ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ಈ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿದ ವೇಳೆ ವಿಕ್ಷಗಳು ಗದ್ದಲದಿಂದಾಗಿ ಸ್ವಲ್ಪ ಸಮಯದವರೆಗೆ ಕಲಾಪವನ್ನು ಮುಂದೂಡಲಾಯಿತು. ಅಲ್ಲದೇ ವಿಪಕ್ಷ ಸಂಸದರು ತಮ್ಮ ಭಿನ್ನಾಭಿಪ್ರಾಯವನ್ನು ಜೆಪಿಸಿ ವರದಿಯಲ್ಲಿ ತಿರುಚಲಾಗಿದೆ ಎಂದು ಆರೋಪಿಸಿದರು. ಆದ್ರೆ ಕೇಂದ್ರವು ಈ ಆರೋಪವನ್ನು ನಿರಾಕರಿಸಿತು.

ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ, ಪ್ರತಿಪಕ್ಷಗಳ ಭಿನ್ನಾಭಿಪ್ರಾಯದ ನಡುವೆ ಶಾಸನಕ್ಕೆ ಹಲವು ತಿದ್ದುಪಡಿಗಳನ್ನು ಸೂಚಿಸಿದೆ. ಕಳೆದ ಜನವರಿಯಲ್ಲಿ ಜೆಪಿಸಿ ಸಭೆಯಲ್ಲಿ ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ದಾರೆ. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಮಾತ್ರವೇ ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page