ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಗಸ್ಟ್ 29ರಂದು ಆಯೋಜಿಸಲಾದ ತಾಲ್ಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ, ವರ್ಧಮಾನ್ ಶಿಕ್ಷಣ ಸಂಸ್ಥೆ , ಕಾರ್ಕಳದ 8ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಎಸ್. ರಾವ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಸಂತೋಷ್ ರಾವ್ ಹಾಗೂ ಶ್ರೀಮತಿ ದೀಕ್ಷಾ ದಂಪತಿಯ ಪುತ್ರಿ.
ಈ ಸಾಧನೆಗೆ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶಶಿಕಲಾ ಕೆ. ಹೆಗ್ಡೆ, ಆಡಳಿತಾಧಿಕಾರಿ ಕರ್ತವ್ಯ ಜೈನ್, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸನ್ನಿಧಿಯನ್ನು ಅಭಿನಂದಿಸಿ ಶುಭ ಹಾರೈಸಿದರು.






















































