
ಸಾಣೂರು: ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ ಪುಲ್ವಾಮಾ ದಾಳಿಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜೇಸಿಐ ಕಾರ್ಕಳ ಘಟಕದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಜೈನ್ ಅವರು ಪುಲ್ವಾಮಾ ದಾಳಿಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.
ವಿದ್ಯಾರ್ಥಿಗಳು ಮೊಂಬತ್ತಿ ಯನ್ನು ಬೆಳಗಿಸಿ ಹುತಾತ್ಮ ಯೋಧರಿಗೆ ಗೌರವ ನಮನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್, ಬುಲ್ ಬುಲ್ ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಿ, ವೀರ ಯೋಧರ ತ್ಯಾಗವನ್ನು ಸ್ಮರಿಸಿದರು. ವಿದ್ಯಾರ್ಥಿಗಳು ದೇಶಪ್ರೇಮದ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಜೇಸಿಐ ಕಾರ್ಕಳದ ಅಧ್ಯಕ್ಷರಾದ ಜೇಸಿ ಶ್ವೇತಾ ಜೈನ್, ವರ್ಧಮಾನ ಸಂಸ್ಥೆಯ ಆಡಳಿತಾಧಿಕಾರಿಯಾದ ಕರ್ತವ್ಯ ಜೈನ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.




















