
ಬೆಂಗಳೂರು: ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ನ ಮಾಜಿ ಸಚಿವ ನಾಗೇಂದ್ರಗೆ
ಆ.3 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಂದು ನಾಗೇಂದ್ರ ಅವರನ್ನು ಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಹಾಜರುಪಡಿಸಿದ್ದು ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಈಗಾಗಲೇ 5 ದಿನಗಳಂತೆ ಎರಡು ಬಾರಿ ಈಗಾಗಲೇ ಇ.ಡಿ ಕಸ್ಟಡಿಗೆ ಪಡೆದಿತ್ತು. ಆದರೆ ಅಕ್ರಮದ ಬಗ್ಗೆ ಇ.ಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸದ ಕಾರಣ ಮತ್ತೆ ಕಷ್ಟಡಿಗೆ ಕೇಳಲು ಇಡಿ ಸಿದ್ಧತೆ ನಡೆಸಿತ್ತು.








