ಧರಣಿಯ ಬದಲು ಪಾದಯಾತ್ರೆ ಮಾಡಲಿ, ಎಂದು ವ್ಯಂಗ್ಯವಾಡಿದ ಶಾಸಕ ಲಕ್ಷ್ಮಣ್ ಸವದಿ

ರಾಜ್ಯದಲ್ಲಿ ವಾಲ್ಮೀಕಿ ನಿಗಮ ವಿಚಾರ, ಹಾಗೂ ಮೂಡಾ ನಿವೇಶನ ಅಕ್ರಮ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಧಿವೇಶನದಲ್ಲಿ ಬಿಜೆಪಿ ಮಂಡಿಸಿದ ನಿಲುವನ್ನು ಎರಡು ಸದನಗಳಲ್ಲೂ ತಿರಸ್ಕರಿಸಿದ ಹಿನ್ನೆಲೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಪ್ರಕರಣವನ್ನು ಸಿಬಿಐ ತನಿಖೆಗೆ ಬಯಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದು, ಈ ವಿಚಾರದಲ್ಲಿ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ದು, ಸ್ಪೀಕರ್ ಚರ್ಚೆಗೆ ಅವಕಾಶ ನೀಡಲಿಲ್ಲ. ಮೂಡಾ ಹಗರಣಗಳನ್ನು ಮುಚ್ಚಿ ಹಾಕಲು ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಪಕ್ಷದ ಮೇಲೆ ಹಗರಣಗಳ ಆರೋಪ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಲಕ್ಷ್ಮಣ್ ಸವದಿ, ಊಟ ಹಾಸಿಗೆ ಕೊಡುತ್ತಾರೆ ಎಂಬ ಕಾರಣಕ್ಕೆ ವಿಧಾನಸೌಧದಲ್ಲಿ ಮಲಗಿ ಹೋಗೋಣ ಅಂತ ವಿಪಕ್ಷಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಬದಲು ಪಾದಯಾತ್ರೆ ಕೈಗೊಂಡಿದ್ದರೆ 20 ವರ್ಷ ಅವರೆಲ್ಲ ರಾಜಕಾರಣ ಮಾಡಲು ಸಾಧ್ಯವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.








