
ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ಅರ್ಜಿ ವಜಾಗೊಳಿಸಿ ತೀರ್ಪು ಪ್ರಕಟಿಸಿದೆ.
ಇದೇ ವೇಳೆ ಬ್ಯಾಂಕಿಂಗ್ ನಿಬಂಧನೆಗಳ ಕಾಯ್ದೆ-1949ರ ಸೆಕ್ಷನ್ 35ಎ ಪ್ರಕಾರ, ಬ್ಯಾಂಕ್ ವ್ಯವಹಾರಗಳ ಕುರಿತು ಯಾವುದೇ ಬ್ಯಾಂಕ್‌ಗಳಿಗೆ ಕಾಲಕಾಲಕ್ಕೆ ನಿರ್ದೇಶನ ನೀಡುವ ಅಧಿಕಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೊಂದಿದೆ. ಆ ಸೆಕ್ಷನ್ ಅನ್ವಯ ಬ್ಯಾಂಕ್ ವ್ಯವಹಾರಗಳಲ್ಲಿ ನಡೆದಿರುವ ವಂಚನೆ ಹಾಗೂ ಅಕ್ರಮದ ಬಗ್ಗೆ ರಾಜ್ಯ ತನಿಖಾ ಸಂಸ್ಥೆಯು ಹಗರಣದಿಂದ ಕೈಬಿಟ್ಟಿರುವ ಬ್ಯಾಂಕಿನ ವ್ಯಕ್ತಿಗಳನ್ನು ಸಿಬಿಐ ತನಿಖೆಗೊಳಪಡಿಸಬಹುದು. ಸಿಬಿಐನಂತಹ ಸ್ವತಂತ್ರ ಸಂಸ್ಥೆಯ ತನಿಖೆಗೆ ವಹಿಸಲು ಕೋರಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ.



















