
ಚಿಕ್ಕಮಗಳೂರು: ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಕರ್ನಾಟಕದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ತಮಿಳುನಾಡಿನ ಕೆ ವಸಂತ ಮತ್ತು ಕೇರಳದ ಟಿಎನ್ ಜೀಶಾ ಶಸ್ತ್ರಾಸ್ತ್ರ ತೊರೆದು ಮುಖ್ಯ ವಾಹಿನಿಗೆ ಬರಲು ಮುಂದಾಗಿದ್ದಾರೆ.
ಇಂದು ಬೆಳಗ್ಗೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಆರು ನಕ್ಸಲರು ಶರಣಾಗಲಿದ್ದೂ ಈಗಾಗಲೇ ನಕ್ಸಲರ ಜೊತೆ ಶರಣಾಗತಿ ಸಮಿತಿ ಮತ್ತು ಶಾಂತಿಗಾಗಿ ನಾಗರೀಕ ಸಮಿತಿ ಯಶಸ್ವಿಯಾಗಿ ಮಾತುಕತೆ ನಡೆಸಿದೆ.
ಮುಂಡಗಾರು ಲತಾ ವಿರುದ್ಧ 59 ಪ್ರಕರಣಗಳು, ಸುಂದರಿ ವಿರುದ್ಧ ಉಡುಪಿ, ದ.ಕನ್ನಡದಲ್ಲಿ 3 ಕೇಸ್‌ಗಳು, ಜಯಣ್ಣ ಮೇಲೆ ಉಡುಪಿ, ಮಂಗಳೂರಿನಲ್ಲಿ 3 ಪ್ರಕರಣಗಳು, ವನಜಾಕ್ಷಿ ವಿರುದ್ಧ15 ಕೇಸ್ ಹಾಗೂ ಕೆ.ವಸಂತ ಮತ್ತು ಟಿ.ಎನ್. ಜೀಶಾ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿದೆ.



















