
ವಿಜೇತ ವಸತಿಯುತ ವಿಶೇಷ ಶಾಲೆ ಮತ್ತು ವೃತ್ತಿ ಶಿಕ್ಷಣ ತರಬೇತಿ ಸಂಸ್ಥೆ ಕಾರ್ಕಳ ವಿಶೇಷ ಶಿಕ್ಷಕ ಹಾಗೂ ಶಿಕ್ಷಕೇತರರ ಸಂಘ ಉಡುಪಿ ಜಿಲ್ಲೆ ಬಡಗುಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ. ಛತ್ರಪತಿ ಫೌಂಡೇಶನ್ ರಿ. ಇವರ ಸಹಯೋಗದಲ್ಲಿ ಇಂದು ಕಾರ್ಕಳ ವಿಜೇತ ವಿಶೇಷ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2024 ತ್ರೋಬಾಲ್ ಪಂದ್ಯಾಟ ಹಾಗೂ ವಿವಿಧ ಆಟೋಟ ಸ್ಮರ್ಧೆ ಸನ್ಮಾನ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.
ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಛತ್ರಪತಿ ಫೌಂಡೇಶನ್ ರಿ. ಅಧ್ಯಕ್ಷರಾದ ಜೇಸಿ ಗಿರೀಶ್ ರಾವ್, ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷರಾದ ರೊ. ಇಕ್ಬಾಲ್ ಅಹಮ್ಮದ್, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕ ಶಿಕ್ಷಕೇತರರ ಸಂಘದ ಗೌರವಾಧ್ಯಕ್ಷರಾದ ಆಗ್ನೇಸ್ ಕುಂದರ್, ರಾಜ್ಯಾಧ್ಯಕ್ಷರಾದ ಡಾ.ಕಾಂತಿ ಹರೀಶ್, ಸ್ಕೌಟ್ & ಗೈಡ್ಸ್ ರಾಜ್ಯ ಸಂಘಟಕರಾದ ಸುಮನ ಶೇಖರ್, ವಿಶೇಷ ಶಿಕ್ಷಕ ಶಿಕ್ಷಕೇತರರ ಸಂಘ ಉಡುಪಿ ಜಿಲ್ಲೆ ಅಧ್ಯಕ್ಷರಾದ ರವೀಂದ್ರ ಹೆಚ್, ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್, ಶ್ರೀ ದುರ್ಗಾ ವಿದ್ಯಾ ಸಂಘ ಅಧ್ಯಕ್ಷರಾದ ಕೆ.ರಾಧಾಕೃಷ್ಣ ಶೆಟ್ಟಿ, ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಸುಮಾರು 15 ವಿಶೇಷ ಶಾಲಾ ಸಿಬ್ಬಂದಿಗಳು ಭಾಗವಹಿಸಿದ್ದು, ಸಂಸ್ಥೆಗಳಲ್ಲಿ ಸೇವಾ ನಿರತರಾಗಿರುವ 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ 11 ಮಂದಿ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರನ್ನು ಗೌರವಿಸಿ ಅಭಿನಂದಿಸಲಾಯಿತು. ಶ್ರೀಮತಿ ಹರ್ಷಿತಾ ಕಿರಣ್ ಕಾರ್ಯಕ್ರಮ ನಿರೂಪಿಸಿ, ಡಾ.ಕಾಂತಿ ಹರೀಶ್ ಸ್ವಾಗತಿಸಿ ರವೀಂದ್ರ ಹೆಚ್ ವಂದಿಸಿದರು.






























































































































