ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು, ಆರೋಗ್ಯ ಮತ್ತು ಕ್ಷೇಮ ಮಂದಿರ ಕುಕ್ಕುಂದೂರು ಬಿ ಕೆ ಎಂ ಸಿ ಮಣಿಪಾಲ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ರಿ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಇಂದು ವಿಜೇತ ವಿಶೇಷ ಶಾಲೆಯಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಕೆಎಂಸಿ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ನಿಶ್ಕರ್ಷ್, ಡಾ.ಶಿಶಿರ್, ಪ್ರಾಥಮಿಕ ಆರೋಗ್ಯ ಕೇಂದ್ರ ನಕ್ರೆ ವೈದ್ಯರಾದ ಡಾ.ಪ್ರತೀಕ್ಷಾ ಶೆಟ್ಟಿ, ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಉಪಸ್ಥಿತರಿದ್ದರು. ಸಾರ್ವಜನಿಕರು ಸುಮಾರು 52 ಮಂದಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.













