
ಕಾರ್ಕಳ ಜೇಸಿ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿಜ್ ಇಂಟರ್ನ್ಯಾಷನಲ್ ಸ್ಪೆಲ್ ಬಿ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸಿಯಾ ಶೆಟ್ಟಿ 7ನೇ ತರಗತಿ ರಾಜ್ಯಕ್ಕೆ ದ್ವಿತೀಯ ಸ್ಥಾನ, ಮೋಕ್ಷ 9ನೇ ತರಗತಿ ರಾಜ್ಯಕ್ಕೆ 4ನೇ ಸ್ಥಾನ ,ತನ್ವಿ 7ನೇ ತರಗತಿ ರಾಜ್ಯಕ್ಕೆ 6ನೇ ಸ್ಥಾನ ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.






















