
ಬೆಂಗಳೂರು: ನಗರ ಪೊಲೀಸರು ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಏಳು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.
ಮಾರ್ಗ ಸೂಚಿ:
- ಮನೆ ಮಾಲೀಕರು ಸಿ ಫಾರ್ಮ್ ಅನ್ನ ಎಫ್ಆರ್‌ಆರ್‌ಓ/ಎಫ್ಆರ್‌ಓಗೆ ಸಲ್ಲಿಸಬೇಕು.
- ಮಾನ್ಯ ವೀಸಾ/ಅನುಮತಿ ಇಲ್ಲದೆ ವಾಸಿಸಲು ಅವಕಾಶ ನೀಡಬಾರದು.
- ಬಾಡಿಗೆದಾರರ ಪಾಸ್‌ಪೋರ್ಟ್ ಮತ್ತು ವೀಸಾ ಪ್ರತಿಗಳು ಕಡ್ಡಾಯವಾಗಿ ಸಂಗ್ರಹಿಸಬೇಕು.
- ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
- ನೋಂದಾಯಿತ ಬಾಡಿಗೆ ಒಪ್ಪಂದ ಮಾಡಬೇಕು.
- ವಿದೇಶಿ ಬಾಡಿಗೆದಾರರ ಬಗ್ಗೆ ಮಾಹಿತಿ ನೀಡದೆ ಇದ್ದರೆ ಕಾನೂನು ಕ್ರಮ.
- ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು.