
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹರಿಯಾಣದಲ್ಲಿ ಆಘಾತಕಾರಿ ಸೋಲು ಅನುಭವಿಸಿದ ಬಳಿಕ ತಮ್ಮ ಎಕ್ಸ್ ಖಾತೆಯಲ್ಲಿ ಹರಿಯಾಣ ಸೋಲಿನ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು ಮತ್ತು ಕೆಲವು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ.
ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಬೆಂಬಲಿಸಿದ ಹರಿಯಾಣದ ಎಲ್ಲಾ ಜನರಿಗೆ ಮತ್ತು ಅವರ ಅವಿರತ ಶ್ರಮಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು. ನಾವು ಮುಂದುವರಿಯುತ್ತೇವೆ, ನಿಮ್ಮ ಹಕ್ಕುಗಳಿಗಾಗಿ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ, ಸತ್ಯಕ್ಕಾಗಿ ಮತ್ತು ನಿಮ್ಮ ಪರವಾಗಿ ನಾವು ಧ್ವನಿಯನ್ನು ಎತ್ತುತ್ತಲೇ ಇರುತ್ತೇವೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ













