
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವಿಶೇಷ ಚೇತನರ ಆರೈಕೆದಾರರಿಗೆ ₹1000 ಮಾಸಿಕ ಭತ್ಯೆ ನೀಡುವ ಯೋಜನೆಗೆ ಚಾಲನೆ ನೀಡಿದ್ದಾರೆ.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ, ಆರೈಕೆದಾರರ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು ಅಂಗವಿಕಲರ ಕಲ್ಯಾಣ ಇಲಾಖೆ ಬಜೆಟ್‌ನಲ್ಲಿ ಕಡಿಮೆಯಾಗಿದ್ದ ₹44 ಕೋಟಿ ಅನುದಾನವನ್ನು ಪೂರಕ ಅಂದಾಜಿನಲ್ಲಿ ಕೊಡುವುದಾಗಿ ಘೋಷಣೆ ಮಾಡಿದರು.
ರಾಜ್ಯದಲ್ಲಿ ಪ್ರಸ್ತುತ ಸುಮಾರು 15 ಲಕ್ಷ ವಿಶೇಷ ಚೇತನರರಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನಾಲ್ಕು ಬಗೆಯ (ಮಿದುಳು ಪಾರ್ಶವಾಯು, ಮಸ್ಕುಲರ್ ಡಿಸ್ಟೋಫಿ, ಪಾರ್ಕಿನ್ಸನ್ ಕಾಯಿಲೆ, ಮಲ್ಟಿಪಲ್ ಸ್ ಕೈರೋಸಿಸ್) ವಿಶೇಷ ಚೇತನರರನ್ನು ಆರೈಕೆ ಮಾಡುವವರಿಗೆ ಮಾಸಿಕ 1000 ನೀಡುವ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.



















