
ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕಸಂತೆಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ.
ದಿನಾಂಕ 23ರ ಬೆಳಿಗ್ಗೆ 11.00 ಗಂಟೆಗೆ ಖ್ಯಾತ ವಾಗ್ಮಿ,ಸಾಹಿತಿ ಪ್ರಭಾಕರ ಕೊಂಡಳ್ಳಿಯವರುಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50ಶೇಕಡಾ ವಿಶೇಷ ರಿಯಾಯಿತಿಯನ್ನುನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ.ಪುಸ್ತಕ ಪ್ರೇಮಿಗಳು ಇದರಪ್ರಯೋಜನವನ್ನು ಪಡೆದುಕೊಳ್ಳಬಹುದು.