“ಇದು ಅಚ್ಚೆ ದಿನ್?” ಎಂದು ಟೀಕಿಸಿದ ಪ್ರಿಯಾಂಕ್ ಖರ್ಗೆ

ಕಲಬುರಗಿ / ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಪಟ್ಟಣದಲ್ಲಿ ನಡೆದ ರೂ 1069 ಕೋಟಿ ವೆಚ್ಚದ ಕಾಮಗಾರಿಗಳು ಅಡಿಗಲ್ಲು ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದು ಈ ವೇಳೆ ವಿಶ್ವ ಮಹಿಳಾ ದಿನವಾದ ಇಂದೇ ಕೇಂದ್ರ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಸಿದೆ. ಇದು ಅಚ್ಛೇ ದಿನ್ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದ ಜನರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿಯ ಹಾಗೂ ಸ್ವಾಭಿಮಾನದ ಜೀವನ ನಡೆಸುತ್ತಿದ್ದಾರೆ. ನಿಮ್ಮ ದುಡ್ಡನ್ನು ಗ್ಯಾರಂಟಿ ಯೋಜನೆಗಳ ಮೂಲಕ ನಿಮಗೆ ವಾಪಸ್ ಕೊಟ್ಟರೆ, ಬಿಜೆಪಿಯವರು ಟೀಕಿಸುತ್ತಿದ್ದಾರೆ. ಅವರಿಗೆ ಜನರ ದುಡ್ಡು ಜನರಿಗೆ ಮರುಬಳಕೆಯಾಗುವುದು ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.






