
ಆಂಧ್ರ ಪ್ರದೇಶ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎನ್‌ಡಿಎ ಸಮ್ಮಿಶ್ರ ಸರ್ಕಾರ ರಚನೆಯಾಗಿ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳಗಿರಿಯ ಸಿಕೆ ಕನ್ವೆನ್ಷನ್ ಹಾಲ್‌ನಲ್ಲಿ ಎನ್‌ಡಿಎ ಮೈತ್ರಿಕೂಟದ ಶಾಸಕರು, ಸಂಸದರು ಮತ್ತು ಎಂಎಲ್‌ಸಿಗಳ ಸಭೆಯಲ್ಲಿ ಮಾತನಾಡಿ ಹಿಂದಿನ ವೈಎಸ್‌ಆರ್ ಸರ್ಕಾರ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಾಮಾನ್ಯವಾಗಿ ತಿರುಮಲ ಲಡ್ಡು ಪ್ರಸಾದಕ್ಕೆ ಶುದ್ಧ ಹಸುವಿನ ತುಪ್ಪ ಬಳಸಬೇಕು. ಆದರೆ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುವ ಮೂಲಕ ವೆಂಕಟೇಶ್ವರ ಸ್ವಾಮಿಗೆ ಅವಮಾನ ಮಾಡಿದ್ದಾರೆ. ನಮ್ಮ ಸರ್ಕಾರ ಬಂದ ಬಳಿಕ ಎಲ್ಲ ಗುಣಮಟ್ಟದ ಪದಾರ್ಥಗಳೊಂದಿಗೆ ಲಡ್ಡು ಪ್ರಸಾದವನ್ನು ತಯಾರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ತನ್ನ ಸರ್ಕಾರದಲ್ಲಿ ಅಣ್ಣಾ ಕ್ಯಾಂಟೀನ್ ರದ್ದು ಮಾಡುವ ಮೂಲಕ ಜಗನ್ ಕೆಟ್ಟ ಕೆಲಸ ಮಾಡಿದ್ದಾರೆ. ಜಗನ್ ಆಡಳಿತಾವಧಿಯಲ್ಲಿ ಅನೇಕ ಭ್ರಷ್ಟಾಚಾರವನ್ನು ಮಾಡಿದ್ದಾರೆ. ತಪ್ಪು ಮಾಡಿದವರನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.













