28.3 C
Udupi
Thursday, April 30, 2026
spot_img
spot_img
HomeBlogಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ಉಚಿತ ಸಂಚಾರಕ್ಕೆ ಅವಕಾಶ ನೀಡಲು ಚಿಂತನೆ: ಡಿಕೆ ಶಿವಕುಮಾರ್

ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ಉಚಿತ ಸಂಚಾರಕ್ಕೆ ಅವಕಾಶ ನೀಡಲು ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಚರಣ್, ‘ನಿಮ್ಮ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಿ. ಅದರಲ್ಲಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೀರಿ. ಇದರಿಂದ ನಮ್ಮ ಅಮ್ಮ, ಅಕ್ಕ, ತಂಗಿಯರು, ಸ್ನೇಹಿತೆಯರಿಗೆ ಅನುಕೂಲ ಆಗುತ್ತಿದೆ ಹೊಲತು ಗಂಡು ಮಕ್ಕಳಿಗಾಗಿ ಇಂತಹ ಯಾವುದೇ ಯೋಜನೆ ಇಲ್ಲವೇ?’ ಎಂದು ಪ್ರಶ್ನಿಸಿದರು.

ಈ ಪ್ರಶ್ನೆಗೆ ಉತ್ತರ ನೀಡಿದ ಡಿ.ಕೆ.ಶಿವಕುಮಾರ್ ಅವರು, ‘ನಿಮ್ಮ ತಾಯಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2000, ಅನ್ನಭಾಗ್ಯದಡಿ 10 ಕೇಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಎಲ್ಲ ಹೆಣ್ಣು ಮಕ್ಕಳಿಗೂ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುತ್ತಿದೆ. ಈಗ ನೀನು ಕೇಳಿರುವ ಪ್ರಶ್ನೆಗೆ, ಶಕ್ತಿ ಯೋಜನೆಯಡಿ ಒಂದು ವಯೋಮಾನದವರೆಗಿನ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಮುಂದೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page