24.3 C
Udupi
Sunday, August 31, 2025
spot_img
spot_img
HomeBlogಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿ ಚಿನ್ನಯ್ಯನನ್ನು ಬಂಧಿಸಿದ ಎಸ್ಐಟಿ

ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿ ಚಿನ್ನಯ್ಯನನ್ನು ಬಂಧಿಸಿದ ಎಸ್ಐಟಿ

ಮಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿ ಚಿನ್ನಯ್ಯನನ್ನು ಸತತ ವಿಚಾರಣೆಯ ಬಳಿಕ ವಿಶೇಷ ತನಿಖಾ ತಂಡ ಬಂಧಿಸಿದೆ.

ಅನಾಮಿಕ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮಾಸ್ಕ್‌ ಮ್ಯಾನ್‌ ವಿರುದ್ಧವೇ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿ ವಿವಿಧ ಆಯಾಮಗಳಲ್ಲಿ ಅನಾಮಿಕನನ್ನು ಪ್ರಶ್ನೆ ಮಾಡಿದ್ದರು.

ಇಷ್ಟೆಲ್ಲಾ ತನಿಖೆ ಬಳಿಕ ಮಾಸ್ಕ್‌ ಮ್ಯಾನ್‌ ಹೆಣೆದಿದ್ದು ಸುಳ್ಳಿನ ಬಲೆ ಎಂಬುದು ಬೆಳಕಿಗೆ ಬಂದಿದೆ. ಎಸ್‌ಐಟಿ ಪೊಲೀಸರು ಕೇಳಿರುವ ಪ್ರಶ್ನೆಗಳಿಗೆ ನಿರೀಕ್ಷೆಯಂತೆ ಅನಾಮಿಕನಿಂದ ಯಾವುದೇ ಉತ್ತರಗಳು ಬರದೆ ಬದಲಾಗಿ ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ ಬುರುಡೆ ಯಾವ ಭಾಗದಿಂದ ತೆಗೆದು ತಂದದ್ದು ಎಂಬ ಪ್ರಶ್ನೆಗೂ ಸರಿಯಾದ ಉತ್ತರ ಸಿಕ್ಕಿರಲಿಲ್ಲ. ಬಂಗ್ಲೆ ಗುಡ್ಡೆ, ಕಲ್ಲೇರಿ, ರತ್ನಗಿರಿ, ಬೋಳಿಯಾರು ಎಂಬ ಉತ್ತರವನ್ನಷ್ಟೇ ಹೇಳಿದ್ದು ತೀವ್ರ ವಿಚಾರಣೆ ಬಳಿಕ ಮುಸುಕುಧಾರಿ ಹೇಳಿದ್ದೆಲ್ಲ ಸುಳ್ಳು ಎಂದು ತಿಳಿಯುತ್ತಿದ್ದಂತೆ ಆತನನ್ನ ಬಂಧಿಸಿರುವ ಎಸ್ಐಟಿ ಇಂದು ಕೋರ್ಟ್‌ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page