ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ, “ಕ್ರೀಡಾ ಭಾರತ್” ತರಬೇತಿ ಕಾರ್ಯಕ್ರಮ

ಕಾರ್ಕಳ: ದೈಹಿಕ ಹಾಗೂ ಮಾನಸಿಕ ದೃಢತೆಯು ಪ್ರತಿಯೊಂದು ಮಗುವಿಗೆ ಅವಶ್ಯಕವಾಗಿ ಬೇಕಾಗಿರುವಂತಹ ಅಂಶ. ಈ ಎರಡು ಅಂಶಗಳು ಮಗುವನ್ನು ಶೈಕ್ಷಣಿಕವಾಗಿ ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದಕ್ಕಾಗಿ ಒಂದು ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗಿದೆ. ಎಂದು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಕೋಟ್ಯಾನ್ ಇವರು ಹೇಳಿದರು.

ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ ಇದರ ರಜತ ಮಹೋತ್ಸವದ ಅಂಗವಾಗಿ, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಸಹಕಾರದೊಂದಿಗೆ ಸಂಸ್ಥೆಯಲ್ಲಿ ನಡೆದ ‘ಕ್ರೀಡಾ ಭಾರತ್’ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಶ್ರೀ ಕೆ ವೆಂಕಟೇಶ್ ಪ್ರಭು ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸೆಂಟರ್ ಆಫ್ ಎಕನಾಮಿಕ್ಸ್ ಅಂಡ್ ಸೋಶಿಯಲ್ ನೆಟ್ವರ್ಕಿಂಗ್, ಇದರ ಪ್ರೊಫೆಸರ್ ಡಾ. ಸತೀಶ್ ಕುಮಾರ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಡಾ. ರೆನ್ ಇವರು ಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಂಸ್ಥೆಯ ಪ್ರಾಂಶುಪಾಲೆ ಪ್ರಮೀಳಾ ಕೋಟ್ಯಾನ್ ಇವರು ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಾನ್ವಿ ಜಿ ಎಸ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಕಾರ್ತಿಕೇಯ ಇವರು ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.




















