27 C
Udupi
Friday, March 14, 2025
spot_img
spot_img
HomeBlogಶಿರಾಡಿ ಘಾಟ್ ನಲ್ಲಿ ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ತಾಯಿ-ಮಗ ಮೃತ್ಯು

ಶಿರಾಡಿ ಘಾಟ್ ನಲ್ಲಿ ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ತಾಯಿ-ಮಗ ಮೃತ್ಯು

ಸಕಲೇಶಪುರ: ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ಮಂಗಳವಾರ ಬೆಳಿಗ್ಗೆ ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಢಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಸಂಭವಿಸಿದೆ .

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಢಿಕ್ಕಿ ಹೊಡೆದಿದ್ದು ಪರಿಣಾಮ ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಮೃತಪಟ್ಟಿದ್ದಾರೆ.

ಮದುವೆ ಔತಣಕೂಟದಲ್ಲಿ ಭಾಗವಹಿಸಿ, ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಮಕ್ಕಳ ಸಹಿತ ಇತರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page