
ಕಾರವಾರ: ಜುಲೈ 16 ರಂದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಉಂಟಾಗಿ 11 ಮಂದಿ ಕಾಣೆಯಾಗಿದ್ದು ಎಂಟು ಮಂದಿಯ ಶವ ಪತ್ತೆಯಾಗಿತ್ತು. ಈ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ್ದ ಸಂದರ್ಭದಲ್ಲಿ, ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನ್ನಾಥ್ ಪುತ್ರಿ ಕೃತಿ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು.
ಇದೀಗ ಕೈಗಾ ಅಣು ವಿದ್ಯುತ್ ಸ್ಥಾವರದ ಬಿ ಎಚ್ ಇ ಎಲ್ ನಲ್ಲಿ ಉದ್ಯೋಗ ಕೊಡಿಸುವ ಮೂಲಕ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಯವರು ಕೃತಿಕಾ ಅವರಿಗೆ ದೂರವಾಣಿ ಕರೆ ಮಾಡಿ ಉದ್ಯೋಗ ಖಾತರಿಪಡಿಸಿದ್ದಾರೆ. ಜಗನ್ನಾಥ್ ಅವರ ಇನ್ನೋರ್ವ ಪುತ್ರಿಗೆ ರಾಜ್ಯ ಸರಕಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಳೆದ ವಾರ ನೌಕರಿ ನೀಡಿತ್ತು.













