
ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ಆಯಾ ತಾಲೂಕಿನ ತಹಶಿಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ
ಧಾರಾಕಾರ ಮಳೆಗೆ 3 ಮನೆಗಳು ಧರೆಗುರುಳಿವೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಹಬೀಬಾ, ಇನಾಯತ್ ಹಾಗೂ ನಿಸಾರ್ ಎಂಬವರಿಗೆ ಸೇರಿದ ಮನೆಗಳು ಕುಸಿದು ಬಿದ್ದಿದ್ದು,ಮನೆ ಬಿದ್ದರೂ ಸ್ಥಳಕ್ಕೆ ಬಾರದ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.








