
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಗಾಯಕಿ ಜೊತೆ ಹಸೆಮಣೆ ಏರಲಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಪೂಜಿಸಲೆಂದೇ ಹೂಗಳ ತಂದೆ ಹಾಡುವ ಮೂಲಕ ಮೋದಿಯವರ ಮೆಚ್ಚುಗೆಗೆ ಪಾತ್ರರಾಗಿದ್ದ ಗಾಯಕಿ ಸಿವಶ್ರೀ ಸ್ಕಂದ ಪ್ರಸಾದ್ ಅವರನ್ನು ತೇಜಸ್ವಿ ಸೂರ್ಯ ಮದುವೆ ಆಗಲಿದ್ದಾರೆ ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಚೆನ್ನೈ ಮೂಲದ ಸಿವಶ್ರೀ ಅವರು ಹೆಸರಾಂತ ಗಾಯಕಿ, ಭರತನಾಟ್ಯ ಪ್ರವೀಣೆ ಹಾಗೂ ಬಿಟೆಕ್ ಪದವೀಧರೆಯಾಗಿದ್ದು ಸದ್ಯ ಎರಡೂ ಕುಟುಂಬಗಳ ಮಧ್ಯೆ ವಿವಾಹಕ್ಕೆ ಮಾತುಕತೆ ನಡೆಯುತ್ತಿದೆ. ತೇಜಸ್ವಿ ಹಾಗೂ ಸಿವಶ್ರೀ ಸಹ ಈಗಾಗಲೇ ಭೇಟಿಯಾಗಿ ಮಾತುಕತೆ ಮಾಡಿದ್ದು ಅಂದುಕೊಂಡಂತೆ ಎಲ್ಲವೂ ನಡೆದರೆ ಇನ್ನು ನಾಲ್ಕೈದು ತಿಂಗಳಲ್ಲಿ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.



