
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದ್ದು 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ.
ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆಯಾಗಿದ್ದು ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನ ಪಡೆದಿದೆ.



