ಬೆಂಗಳೂರು: ಹೈಕೋರ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡುವಂತಿಲ್ಲ ಎಂದು ಮಹೇಶ್ ಶೆಟ್ಟಿ ತಿಮರೋಡಿಗೆ ಆದೇಶ ಹೊರಡಿಸಿದ್ದು ಒಂದು ವೇಳೆ ಮಾನಹಾನಿಕರ ಅಥವಾ ಅಪರಾಧಕರ ಹೇಳಿಕೆ ನೀಡಿದ್ದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಅವರು ಡಾ| ವೀರೇಂದ್ರ ಹೆಗ್ಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.