30.8 C
Udupi
Tuesday, April 7, 2026
spot_img
spot_img
HomeBlogಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿ. ಕಾರ್ಕಳ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿ. ಕಾರ್ಕಳ

spot_imgspot_img

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ಓಂ ಶ್ರೀ ಮಂಜುನಾಥಾಯ ನಮಃ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಕಾರ್ಕಳ ತಾಲೂಕಿನ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ರಾಜಾಪುರ ಸಭಾಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕಿನ ಕೇಂದ್ರ ಸಮಿತಿಯ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ್ ಅವರು ವಹಿಸಿದ್ದು ಬಂದಿರುವ ಎಲ್ಲರಿಗೂ ಶುಭ ಹಾರೈಸಿದರು.ಉಡುಪಿ ಜಿಲ್ಲೆಯ ನಿರ್ದೇಶಕರಾದ ಶ್ರೀ ಯುತ ನಾಗರಾಜ್ ಶೆಟ್ಟಿಯವರಾದ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಎಲ್ಲಾ ಮಹಿಳೆಯರನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಪ್ರಭಾವಿ ವ್ಯಕ್ತಿಗಳನ್ನಾಗಿ ಮಾಡುವುದು ಜೊತೆಗೆ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ತೀರಾ ಕೆಳಮಟ್ಟದಲ್ಲಿರುವವರಿಗೆ ಮನೆ ನಿರ್ಮಾಣ ಮಾಡುವ ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಯೋಜನೆ ಕಳೆದ 42 ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಕಾರ್ಯಕ್ರಮದ *ಉದ್ಘಾಟನೆಯನ್ನು ಶ್ರೀ ನೀರೆ ರವೀಂದ್ರ ನಾಯಕ್ ಉಪಾಧ್ಯಕ್ಷರು ರಾಜಾಪುರ ಸಾರಸತ್ವ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ಲಿ,ಇವರು ದೀಪವನ್ನು ಬೆಳಗಿಸಿ ಮಹಿಳೆಯರಿಗೆ ಉತ್ತಮ ಮಾಹಿತಿ ಮಾರ್ಗದರ್ಶನವನ್ನುನೀಡಿದರು ಸಂಪನ್ಮೂಲ ವ್ಯಕ್ತಿಯಾದ ಜಯಶ್ರೀ ಭಟ್ ಇವರು ಸಂಸ್ಕೃತಿ ಸಂಸ್ಕಾರ ಉಳಿಸುವಿಕೆಯಲ್ಲಿ ಮಹಿಳೆಯರ ಪಾತ್ರ ವಿಷಯ ಮಂಡನೆ ಮಾಡಿದರು. ಹಾಗೂ ಈ ಕಾರ್ಯಕ್ರಮದ ವೇದಿಕೆಯಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ತರಬೇತಿಯನ್ನು ಪಡೆದುಕೊಂಡ ಶ್ರೀದೇವಿ ಸದಸ್ಯರಿಗೆ ರೋಟರಿ ಕ್ಲಬ್ ವತಿಯಿಂದ ಉಚಿತ ಟೈಲರಿಂಗ್ ಮಿಷಿನ್ ವಿತರಣೆಯನ್ನು ಮಾಡಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಹೆಗ್ಡೆ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ )ಕಾರ್ಕಳ ,ಇಕ್ಬಾಲ್ ಅಹಮ್ಮದ್ ಅಧ್ಯಕ್ಷರು ರೋಟರಿ ಕ್ಲಬ್ ಕಾರ್ಕಳ ,ಜೆಸಿ ಶ್ವೇತಾ ಎಸ್ ಜೈನ್ ಅಧ್ಯಕ್ಷರು ಜೆಸಿಐ ಕಾರ್ಕಳ ಉಪಸ್ಥಿತರಿದ್ದರು. ಒಕ್ಕೂಟದ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಎಲ್ಲಾ ಸಂಯೋಜಕರು ಮತ್ತು ಸದಸ್ಯರು ಉಪಸ್ಥಿತರಿದ್ದರು. , ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ರಂಗೋಲಿ, ಪುಷ್ಪಗುಚ್ಛ,ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಕಳ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಹೇಮಲತಾರವರು ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಕಾರ್ಕಳ ವಲಯದ ಮೇಲ್ವಿಚಾರಕಿಯಾದ ಗೀತಾ ಹೆಗ್ಡೆ ರವರು ನಿರೂಪಣೆಯನ್ನು ಮಾಡಿದರು , ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಲಕ್ಷ್ಮಿರವರು ಕಾರ್ಯಕ್ರಮದ ವರದಿ ವಾಚಿಸಿದರು.ಬಂಗ್ಲೆಗುಡ್ಡೆಯ ಸೇವಾಪ್ರತಿನಿಧಿ ಸುನೀತಾ ಶೆಟ್ಟಿ ರವರು ಧನ್ಯವಾದ ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page